+91-8482-245241 regkvafsu@gmail.com

ಕುಲಾಧಿಪತಿಗಳು

ಗೌರವಾನ್ವಿತ ಶ್ರೀ ಥಾವರ್ ಚಂದ್ ಗೆಹ್ಲೋಟ್
ಕರ್ನಾಟಕದ ಘನತೆವೆತ್ತ ರಾಜ್ಯಪಾಲರು

ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಮೇ 18, 1948 ರಂದು ಜನಿಸಿದರು. ಅವರು ಕರ್ನಾಟಕದ 19ನೇ ರಾಜ್ಯಪಾಲರಾಗಿ 11ನೇ ಜುಲೈ 2021 ರಂದು ಅಧಿಕಾರ ಸ್ವೀಕರಿಸಿದ್ದಾರೆ. ಉಜ್ಜಯಿನಿಯ ವಿಕ್ರಮ್ ವಿಶ್ವವಿದ್ಯಾಲಯದಿಂದ ಬಿ.ಎ. ಪದವಿ ಪಡೆದಿದ್ದಾರೆ. ಅವರಿಗೆ ಡಾ. ಬಿ. ಆರ್. ಅಂಬೇಡ್ಕರ್ ಸಾಮಾಜಿಕ ವಿಜ್ಞಾನಗಳ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

ಈ ಮೊದಲು ಅವರು ಮೂರು ಬಾರಿ ಮಧ್ಯಪ್ರದೇಶ ವಿಧಾನಸಭೆಯ ಸದಸ್ಯರಾಗಿ, ಎರಡು ಬಾರಿ ರಾಜ್ಯಸಭೆಯ ಸದಸ್ಯರಾಗಿ ಮತ್ತು ನಾಲ್ಕು ಬಾರಿ ಲೋಕಸಭಾ ಸಂಸದರಾಗಿ ಆಯ್ಕೆಯಾಗಿದ್ದರು. ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಗೌರವ ಸಂದಿದೆ. 2014 ರಿಂದ 2021ರವರೆಗೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿದ್ದರು. ಅವರು ರಾಜ್ಯಸಭೆಯಲ್ಲಿ ನಾಯಕರಾಗಿದ್ದರು. ಸಂಸದೀಯ ಮಂಡಳಿ ಮತ್ತು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರಾಗಿದ್ದರು.