+91-8482-245241 regkvafsu@gmail.com

ಮುಧೋಳ ಶ್ವಾನ ಸಂಶೋಧನಾ ಹಾಗೂ ಮಾಹಿತಿ ಕೇಂದ್ರ, ತಿಮ್ಮಾಪುರ, ಮುಧೋಳ

ಕರ್ನಾಟಕ ಸರ್ಕಾರವು ದಿನಾಂಕ 24.09.2009ರಲ್ಲಿ ಮುಧೋಳ ಶ್ವಾನ ತಳಿಯ ಸಂಶೋಧನೆ, ಸಂರಕ್ಷಣೆ, ಸಂತಾನೋತ್ಪತ್ತಿ ಹಾಗೂ ಮಾರುಕಟ್ಟೆಯಂತಹ ವಿವಿಧ ಚಟುವಟಿಕೆಗಳ ಪ್ರೋತ್ಸಾಹಕ್ಕಾಗಿ ಬೀದರನ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಅಡಿಯಲ್ಲಿ ಈ ಕೇಂದ್ರವನ್ನು ಸ್ಥಾಪನೆ ಮಾಡಿದೆ. ಕೇಂದ್ರವು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕು ತಿಮ್ಮಾಪುರ ಗ್ರಾಮದ ರಾಷ್ಟ್ರಿಯ ಹೆದ್ದಾರಿ 218 ಕ್ಕೆ ಹೊಂದಿಕೊಂಡಂತೆ ಸುಮಾರು 40 ಎಕರೆ ವಿಸ್ತೀರ್ಣದಲ್ಲಿ ತನ್ನ ಕಾರ್ಯ ಚಟುವಟಿಕೆಗಳನ್ನು ನಡೆಸುತ್ತಿದೆ.